
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಅಥಣಿ ಟಿಕೆಟ್ ವಿಚಾರವಾಗಿ, ಲಕ್ಷ್ಮಣ ಸವದಿ ಅಥಣಿ ಟಿಕೆಟ್ ಕೇಳಿರುವುದು ನಿಜ. ಆದರೆ ಬಿಜೆಪಿ ಸರ್ಕಾರ ರಚನೆ ವೇಳೆ ಮಹೇಶ್ ಕುಮಟಳ್ಳಿ ಸಹಾಯ ಮಾಡಿದ್ದಾರೆ. ಸವದಿ ಜೊತೆ ನಾನು ಈಗಾಗಲೇ ಮಾತನಾಡಿದ್ದೇನೆ ಎಂದು ಹೇಳಿದರು.
ಲಕ್ಷ್ಮಣ್ ಸವದಿ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಆತುರದ ನಿರ್ಧಾರ ಕೈಗೊಳ್ಳಬೇಡಿ ಎಂದು ಹೇಳಿದ್ದೇನೆ. ಮತ್ತೊಮ್ಮೆ ಅವರ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ. ಈ ಮೂಲಕ ಪರೋಕ್ಷವಾಗಿ ಮಹೇಶ್ ಕುಮಟಳ್ಳಿಗೆ ಬಿಜೆಪಿ ಟಿಕೆಟ್ ಎಂದು ಹೇಳಿದ್ದಾರೆ.

