HomeKarnatakaBIG NEWS: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಗೆ ಸೇರ್ಪಡೆಯಾಗ್ತಾರಾ.....? ಸತೀಶ್ ಜಾರಕಿಹೊಳಿ ಹೇಳಿದ್ದೇನು.....?

BIG NEWS: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಗೆ ಸೇರ್ಪಡೆಯಾಗ್ತಾರಾ…..? ಸತೀಶ್ ಜಾರಕಿಹೊಳಿ ಹೇಳಿದ್ದೇನು…..?

ಬೆಳಗಾವಿ: ಈ ಬಾರಿ ಚುನವಾಣೆಯಲ್ಲಿ ಬೆಳಗಾವಿಯಲ್ಲಿ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೆಲವು ಕಡೆಗಳಲ್ಲಿ ಬಂಡಾಯ ಅಭ್ಯರ್ಥಿಗಳು ಸ್ಪರ್ಧೆ ಮಾಡಿಯೇ ಮಾಡ್ತಾರೆ. ಕೆಲವರು ಪಕ್ಷೇತರ ಅಭ್ಯರ್ಥಿಗಳಾಗಿ ನಿಲ್ತಾರೆ. ರಾಯಭಾಗ, ಸವದತ್ತಿ, ಕಿತ್ತೂರು ಕ್ಷೇತ್ರಗಳಲ್ಲಿ ಸಂಧಾನ ಮಾಡುತ್ತಿದ್ದೇವೆ. ಕೊನೆವರೆಗೂ ಪ್ರಯತ್ನ ಮಾಡುತ್ತೇವೆ. ಸಂಧಾನ ಆಗದಿದ್ದರೆ ಬಿಟ್ಟು ಬಿಡ್ತೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿದ ಸತೀಶ್ ಜಾರಕಿಹೊಳಿ, ಲಕ್ಷ್ಮಣ ಸವದಿ ಕಾಂಗ್ರೆಸ್ ನಾಯಕರೊಂದಿಗೆ ಎಲ್ಲಿಯೂ ಚರ್ಚೆ ನಡೆಸಿಲ್ಲ. ಇದೊಂದು ಊಹಾಪೋಹ, ಬೆಳಗಾವಿಯಿಂದ ಯಾರೂ ಕೂಡ ಕಾಂಗ್ರೆಸ್ ಗೆ ಬರುತ್ತಿಲ್ಲ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular