ಮಾಜಿ ಸಿಎಂ ಬೊಮ್ಮಾಯಿ – ಶಾಮನೂರು ಶಿವಶಂಕರಪ್ಪ ರಹಸ್ಯ ಸಭೆ; ಹೊಂದಾಣಿಕೆ ರಾಜಕಾರಣ ಆರೋಪ ಬೆನ್ನಲ್ಲೇ ಕುತೂಹಲ ಮೂಡಿಸಿದ ಉಭಯ ಪಕ್ಷಗಳ ನಾಯಕರ ಭೇಟಿ

ದಾವಣಗೆರೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರನ್ನು ರಹಸ್ಯವಾಗಿ ಭೇಟಿಯಾಗಿ ಚರ್ಚೆ ನಡೆಸಿರುವುದು ರಾಜ್ಯ ರಾಜಕಾರಣಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ದಾವಣಗೆರೆಯ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿಯ ಖಾಸಗಿ ರೆಸಾರ್ಟ್ ನಲ್ಲಿ ನಿನ್ನೆ ರಾತ್ರಿ ಮಾಜಿ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರನ್ನು ಭೇಟಿಯಾಗಿದ್ದಾರೆ. ಸುಮಾರು 25 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣದ ಬಗ್ಗೆ ಸ್ವತಃ ಬಿಜೆಪಿ ನಾಯಕರೇ ಆರೋಪಿಸುತ್ತಿದ್ದಾರೆ. ನಿನ್ನೆ ದಾವಣಗೆರೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಹೊಂದಾಣಿಕೆ ರಾಜಕಾರಣ ವಿಚಾರವಾಗಿ ಕೆಲ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಮಾಜಿ ಸಿಎಂ ಬೊಮ್ಮಾಯಿ, ಶಾಮನೂರು ಶಿವಶಂಕರಪ್ಪ ಭೇಟಿಯಾಗಿ ರಹಸ್ಯ ಸಭೆ ನಡೆಸಿರುವುದು ಅಚ್ಚರಿಗೆ ಕಾರಣವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read