HomeKarnatakaBIG NEWS: ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಅಮಿತ್ ಶಾ ಭೇಟಿ; ಉಪಹಾರ ಕೂಟದಲ್ಲಿ ಭಾಗಿ

BIG NEWS: ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಅಮಿತ್ ಶಾ ಭೇಟಿ; ಉಪಹಾರ ಕೂಟದಲ್ಲಿ ಭಾಗಿ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ್ದಾರೆ.

ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಯಡಿಯೂರಪ್ಪ ನಿವಾಸಕ್ಕೆ ಅಮಿತ್ ಶಾ ಆಗಮಿಸಿದ್ದು, ಅಮಿತ್ ಶಾ ಜೊತೆಗೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೂಡ ಆಗಮಿಸಿದ್ದಾರೆ.

ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ ನಾಯಕರಿಗೆ ಉಪಹಾರ ಕೂಟ ಆಯೋಜಿಸಲಾಗಿದ್ದು, ಅಮಿತ್ ಶಾ ಉಪಹಾರ ಕೂಟದಲ್ಲಿ ಭಾಗಿಯಾಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular