HomeIndiaBIG NEWS: ಮಾಜಿ ಸಿಎಂ ಯಡಿಯೂರಪ್ಪ ಭಾಷಣಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

BIG NEWS: ಮಾಜಿ ಸಿಎಂ ಯಡಿಯೂರಪ್ಪ ಭಾಷಣಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಧಾನಸಭೆಯಲ್ಲಿ ಮಾಡಿದ ಭಾಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಎರಡು ದಿನಗಳ ಹಿಂದೆ ವಿಧಾನಸಭೆಯಲ್ಲಿ ವಿದಾಯದ ಭಾಷಣ ಮಾಡಿದ್ದರು. ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಇನ್ಮುಂದೆ ಸದನಕ್ಕೆ ಪ್ರವೇಶಿಸುವುದಿಲ್ಲ. ಇದು ಒಂದು ರೀತಿಯ ವಿದಾಯದ ಭಾಷಣ ಎಂದು ಹೇಳಿದ್ದರು. ವಿಧಾನಸಭೆಯಲ್ಲಿ ಯಡಿಯೂರಪ್ಪ ಮಾಡಿದ ಭಾಷಣಕ್ಕೆ ಇದೀಗ ಪ್ರಧಾನಿ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular