HomeKarnatakaBIG NEWS: ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು, IAS, KAS ಅಧಿಕಾರಿಗಳ ವಿರುದ್ಧ...

BIG NEWS: ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು, IAS, KAS ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಕಾಂಗ್ರೆಸ್ ನಾಯಕರು ಹಾಗೂ ಐಎಎಸ್ ಅಧಿಕಾರಿಗಳು, ಕೆ ಎ ಎಸ್ ಅಧಿಕಾರಿಗಳ ವಿರುದ್ಧ ಬಿಜೆಪಿ ನಾಯಕ ಎನ್ ಆರ್ ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ, ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ, ಮಾಜಿ ಸಚಿವರಾದ ಕೆ.ಜೆ.ಜಾರ್ಜ್, ಯು.ಟಿ.ಖಾದರ್, ಎಂ.ಬಿ.ಪಾಟೀಲ್, ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್, ಶಾಸಕರಾದ ಹ್ಯಾರಿಸ್, ಎಂ.ಕೃಷ್ಣಪ್ಪ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ವಿರುದ್ಧ ದೂರು ನೀಡಿದ್ದಾರೆ.

ಇದೇ ವೇಳೆ 9 ಐಎ ಎಸ್ ಅಧಿಕಾರಿಗಳು ಹಾಗೂ ಐವರು ಕೆ ಎ ಎಸ್ ಅಧಿಕಾರಿಗಳು ಸೇರಿ ಒಟ್ಟು 21 ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಒಂದೇ ಬಾರಿಗೆ 10 ಪ್ರತ್ಯೇಕ ದೂರುಗಳನ್ನು ಲೋಕಾಯುಕ್ತದಲ್ಲಿ ಎ. ಆರ್ ರಮೇಶ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular