BIG NEWS: ಮಾಜಿ ಸಿಎಂ HDK ಸೇರಿದಂತೆ 9 ಶಾಸಕರ ಪ್ರಮಾಣವಚನ ಬಾಕಿ….!

ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಗೆ ಆಯ್ಕೆಯಾದ ಶಾಸಕರ ಪ್ರಮಾಣವಚನಕ್ಕಾಗಿ ಎರಡು ದಿನಗಳ ಕಾಲ ಅಧಿವೇಶನ ನಡೆದಿತ್ತು. ನೂತನವಾಗಿ ಆಯ್ಕೆಯಾದ 224 ಶಾಸಕರ ಪೈಕಿ 215 ಮಂದಿ ಪ್ರಮಾಣವಚನ ಸ್ವೀಕರಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ 9 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಬೇಕಿದೆ.

ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಒಟ್ಟು ಒಂಬತ್ತು ಮಂದಿ ಪ್ರಮಾಣ ವಚನ ಸ್ವೀಕರಿಸಲು ಇನ್ನೂ ಬಾಕಿ ಇದೆ ಎನ್ನಲಾಗಿದ್ದು, ಈ ಪೈಕಿ ಆರು ಮಂದಿ ಜೆಡಿಎಸ್‌ ಶಾಸಕರಿದ್ದಾರೆ. ಇವರುಗಳು ವಿಧಾನಸಭೆಯ ಬದಲು ಸಭಾಧ್ಯಕ್ಷರ ಕೊಠಡಿಗೆ ತೆರಳಿ ಕಾರ್ಯದರ್ಶಿಗಳಿಂದ ಪ್ರಮಾಣವಚನ ಸ್ವೀಕರಿಸಬೇಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read