ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.
2 ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಮ್ಮ ಅವರನ್ನು ಎರಡು ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.
ವಿಜಯಮ್ಮ ಅವರ ಅಂತ್ಯಕ್ರಿಯೆ ವಿಚಾರವಾಗಿ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
ವಿಜಯಮ್ಮ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಪಕ್ಷದ ಹಿರಿಯ ನಾಯಕರು, ಆತ್ಮೀಯರು ಆದ ಕೆ.ಆರ್ ರಮೇಶ್ ಕುಮಾರ್ ಧರ್ಮಪತ್ನಿ ವಿಜಯಮ್ಮ ಅವರು ನಿಧನರಾದ ಸುದ್ದಿ ತಿಳಿದು ಅತೀವ ನೋವಾಯಿತು.
ರಮೇಶ್ ಕುಮಾರ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. pic.twitter.com/55P2aHG0Kk— Siddaramaiah (@siddaramaiah) February 17, 2023