HomeKarnatakaBIG NEWS: ಮುಂದಿನ ನಡೆ ಬಗ್ಗೆ ಮಂಡ್ಯದಲ್ಲೇ ಹೇಳುತ್ತೇನೆ ಎಂದ ಸಂಸದೆ ಸುಮಲತಾ; ಸುದ್ದಿಗೋಷ್ಠಿಯತ್ತ ಎಲ್ಲರ...

BIG NEWS: ಮುಂದಿನ ನಡೆ ಬಗ್ಗೆ ಮಂಡ್ಯದಲ್ಲೇ ಹೇಳುತ್ತೇನೆ ಎಂದ ಸಂಸದೆ ಸುಮಲತಾ; ಸುದ್ದಿಗೋಷ್ಠಿಯತ್ತ ಎಲ್ಲರ ಚಿತ್ತ

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ಬಗ್ಗೆ ಇಂದು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ ಮಂಡ್ಯದಲ್ಲಿ ಸುಮಲತಾ ನಡೆಸಲಿರುವ ಸುದ್ದಿಗೋಷ್ಠಿ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಬೆಂಗಳೂರಿನಿಂದ ಮಂಡ್ಯಕ್ಕೆ ತೆರಳಿರುವ ಸಂಸದೆ ಸುಮಲತಾ ಸುದ್ದಿಗಾರರೊಂದಿಗೆ ಮಾತನಾಡಿ, ತಮ್ಮ ರಾಜಕೀಯದ ಮುಂದಿನ ನಡೆ ಬಗ್ಗೆ ಮಂಡ್ಯದಲ್ಲಿಯೇ ತಿಳಿಸುತ್ತೇನೆ. ಎಲ್ಲಾ ವಿಚಾರಗಳ ಬಗ್ಗೆಯೂ ಅಲ್ಲಿಯೇ ಹೇಳುತ್ತೇನೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನನ್ನ ಜನ, ನನ್ನ ಜಿಲ್ಲೆಯಲ್ಲಿಯೇ ಮುಂದಿನ ನಡೆ ಬಗ್ಗೆ ತಿಳಿಸುತ್ತೇನೆ. ಮಂಡ್ಯದಲ್ಲಿಯೇ ಮುಂದಿನ ತೀರ್ಮಾನ ಘೋಷಣೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ಸಂಸದೆ ಸುಮಲತಾ ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ರಾಜ್ಯ ರಾಜಕೀಯಕ್ಕೆ ಎಂಟ್ರಿ ಕೊಡಿವುದು ಬಹುತೇಕ ಖಚಿತವಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular