HomeKarnatakaBIG NEWS: ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಎಂದು ಬೆಂಬಲಿಗರ ಘೋಷಣೆ

BIG NEWS: ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಎಂದು ಬೆಂಬಲಿಗರ ಘೋಷಣೆ

ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಇದರ ಮಧ್ಯೆ ಕೆಲವೊಂದು ಸಮೀಕ್ಷೆಗಳು ತಮ್ಮ ಪರ ಇರುವುದರಿಂದ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೇರುವುದು ಖಚಿತ ಎಂಬ ವಿಶ್ವಾಸದಲ್ಲಿರುವ ನಾಯಕರು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ.

ಇದರ ಜೊತೆಗೆ ಮುಖ್ಯಮಂತ್ರಿ ಯಾರಾಗಬೇಕೆಂಬ ವಿಚಾರವೂ ಆಗಾಗ ಮುನ್ನೆಲೆಗೆ ಬರುತ್ತಿದ್ದು, ಸಂದರ್ಶನ ಒಂದರಲ್ಲಿ ಸಿದ್ದರಾಮಯ್ಯ ಆಡಿದ್ದ ಮಾತು ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಬಳಿಕ ಇದಕ್ಕೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ ತಮ್ಮ ಮಾತುಗಳನ್ನು ತಿರುಚಲಾಗಿದೆ ಎಂದಿದ್ದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯದ ಮುಖ್ಯಮಂತ್ರಿಯಾದರೆ ಇದಕ್ಕೆ ನನ್ನ ಸಂಪೂರ್ಣ ಒಪ್ಪಿಗೆ ಇದೆ ಎಂದಿದ್ದರು. ಇದರ ಮಧ್ಯೆ ಇಂದು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಹೆಲಿಪ್ಯಾಡ್ ನಲ್ಲಿ ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಎಂದು ಅವರ ಬೆಂಬಲಿಗರು ಘೋಷಣೆ ಕೂಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ತೆರಳುವ ಸಲುವಾಗಿ ಶೃಂಗೇರಿ ಹೆಲಿಪ್ಯಾಡ್ ಗೆ ಬಂದ ವೇಳೆ ಅವರ ಬೆಂಬಲಿಗರು ಈ ಘೋಷಣೆ ಕೂಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular