BIG NEWS: ಮುಖ್ಯಮಂತ್ರಿಗಳಿಗೆ ಸ್ವಂತ ನಿರ್ಧಾರ ಕೈಗೊಳ್ಳುವ ಶಕ್ತಿಯಿಲ್ಲ; ಉತ್ತರ ಕರ್ನಾಟಕದವರೇ ಸಿಎಂ ಆದ್ರೂ ಆಭಿವೃದ್ಧಿ ಮಾಡಿಲ್ಲ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿ

ಬೆಂಗಳೂರು: ಸರ್ಕಾರದ ಭ್ರಷ್ಟಾಚಾರ, ಬೆಲೆ ಏರಿಕೆ ಜನರಿಗೆ ಬೇಸರ ತಂದಿದೆ. ರಾಜ್ಯ ಸರ್ಕಾರದ ಆಡಳಿತವನ್ನು ಪ್ರತಿದಿನ ನೋಡಿ ಜನರು ಬೇಸತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಸರ್ಕಾರದ ಯೋಜನೆಗಳು ಜನರಿಗೆ ತಲುಪಿಲ್ಲ. ಮೀಸಲಾತಿ ಅನುಷ್ಠಾನ ಮಾಡಲ್ಲ ಅಂತ ಕೋರ್ಟ್ ಗೆ ಹೇಳಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿಯಾಗಿಲ್ಲ. ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿಯಾಗಿದ್ದರೂ ಅಭಿವೃದ್ಧಿ ಮಾಡಿಲ್ಲ. ಸಿಎಂ ಬೊಮ್ಮಾಯಿ ಅವರಿಗೆ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಶಕ್ತಿಯಿಲ್ಲ. ಸಿಎಂ ಆದವರಿಗೆ ವಿಲ್ ಪವರ್ ಬೇಕು ಎಂದು ಗುಡುಗಿದ್ದಾರೆ.

ಇನ್ನು ನನ್ನ ಲೆಕ್ಕಾಚಾರಕ್ಕಿಂತ ಹೆಚ್ಚು ಬೆಂಬಲ ನನಗೆ ಸಿಕ್ಕಿದೆ. ಗೆಲುವಿನ ಅಂತರ ಕಳೆದ ಬಾರಿಗಿಂತಲೂ ಹೆಚ್ಚಾಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ ಎಂದು ಹೇಳಿದರು.

ಜಗದೀಶ್ ಶೆಟ್ಟರ್,ಪ್ರತಿಕ್ರಿಯೆ,ಹುಬ್ಬಳ್ಳಿ,jagadish shettar,hubli,reaction

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read