BIG NEWS: ಮುಖ್ಯಮಂತ್ರಿ ಬೊಮ್ಮಾಯಿಗೆ ಕಿಚ್ಚ ಸುದೀಪ್ ಬೆಂಬಲ ವಿಚಾರ; ಡಿ.ಕೆ. ಶಿವಕುಮಾರ್ ಹೇಳಿದ್ದೇನು ?

ನವದೆಹಲಿ: ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನಟ ಕಿಚ್ಚ ಸುದೀಪ್ ಬೆಂಬಲ ನೀಡಿರುವ ವಿಚಾರವಾಗಿ ಇದರಿಂದ ನಮಗೆ ಯಾವುದೇ ಅಭ್ಯಂತರವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಕಲಾವಿದರು ತಮಗೆ ಬೇಕಾದವರನ್ನು ಚುನಾವಣೆಯಲ್ಲಿ ಬೆಂಬಲಿಸುತ್ತಾರೆ. ಸರ್ಕಾರ ಸಿನಿಮಾ ನಟರ ಮೇಲೆ ಒತ್ತಡ ಹಾಕಿರಬಹುದು ಅಥವಾ ನಟರ ಬಳಿ ಮನವಿ ಮಾಡಿಕೊಂಡಿರಬಹುದು ಎಂದು ಹೇಳಿದರು.

ಇದೇ ವೇಳೆ ಈ ಹಿಂದೆ ನಟ ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿದ್ದ ವಿಷಯವಾಗಿ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ನಾನು ಹಾಗೂ ಸುದೀಪ್ ಹಳೇ ಸ್ನೇಹಿತರು. ರಾಜಕೀಯ ಉದ್ದೇಶದಿಂದ ನಾನು ಸುದೀಪ್ ಅವರನ್ನು ಭೇಟಿಯಾಗಿಲ್ಲ. ರಾಜಕೀಯ ಚರ್ಚೆ ಕೂಡ ನಡೆದಿಲ್ಲ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read