BIG NEWS: ಮುತ್ತಪ್ಪ ರೈ ಮಗ ಸೇರಿದಂತೆ 8 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಉದ್ಯಮಿ ಶ್ರೀನಿವಾಸ್ ನಾಯ್ಡು ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ಪುತ್ರ ಸೇರಿದಂತೆ 8 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ಸದಾಶಿವನಗರ ಠಾಣೆ ಪೊಲೀಸರು ಬೆಂಗಳೂರಿನ ಎಸಿಎಂಎಂ ನ್ಯಾಯಾಲಯಕ್ಕೆ 188 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಆರೋಪಿಗಳಾದ ರಿಕ್ಕಿ ರೈ, ನಾರಾಯಣಸ್ವಾಮಿ, ಅಭಿನಂದನ್, ಮುನಿಯಪ್ಪ, ಗಣೇಶ್, ಶಶಾಂಕ್, ನಿರ್ಮಲ್, ರೋಹಿತ್, ರಾಕೇಶ್ ಸೇರಿದಂತೆ 8 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

2021ರ ಅಕ್ಟೋಬರ್ ನಲ್ಲಿ ಸದಾಶಿವನಗರದ ಸಪ್ತಗಿರಿ ಅಪಾರ್ಟ್ ಮೆಂಟ್ ನಲ್ಲಿ ಉದ್ಯಮಿ ಶ್ರೀನಿವಾಸ್ ನಾಯ್ಡುಗೆ ಸೇರಿದ ಐಷಾರಾಮಿ ಕಾರಿಗೆ ಬೆಂಕಿ ಹಚ್ಚಿ ನಾಶ ಪಡಿಸಲಾಗಿತ್ತು. ಈ ಪ್ರಕರಣ ಸಂಬಂಧ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಸೇರಿದಂತೆ 8 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read