BIG NEWS : ಮುಸ್ಲಿಮರು, ಅನ್ಯ ಧರ್ಮೀಯರನ್ನು ನಮ್ಮ ಸರ್ಕಾರ ಸಮಾನವಾಗಿ ಕಾಣುತ್ತದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲಿಂಮರು ಮತ್ತು ಅನ್ಯ ಧರ್ಮೀಯರು. ನಮ್ಮ ಸರ್ಕಾರ ಸಂವಿಧಾನದ ಆಶಯದಂತೆ ಈ ಎಲ್ಲರನ್ನೂ ಸಮಾನವಾಗಿ ಕಾಣುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಊರುಸ್ ಸಮಾರಂಭದಲ್ಲಿ ಪಾಲ್ಗೊಂಡು, ಆಗಮಿಸಿದ್ದ ಸಹಸ್ರಾರು ಜನರನ್ನು ಉದ್ದೇಶಿಸಿ ಮಾತನಾಡಿದರು.

ದೇಶದಲ್ಲಿ ಅನೇಕ ಸೂಫಿ, ಸಾಧು, ಸಂತರು, ಸಾಮಾಜಿಕ ಹರಿಕಾರರು ಬಂದು ಹೋಗಿದ್ದಾರೆ. ಇವರೆಲ್ಲರೂ ಮನುಷ್ಯ ಧರ್ಮವನ್ನು ಪ್ರತಿಪಾದಿಸಿದವರು. ಆದ್ದರಿಂದ ನಾವು ಮಾನವೀಯ ನೆಲೆಯಲ್ಲಿ ಸಮಾಜವನ್ನು ಬೆಸೆಯಬೇಕು.

ಉಳ್ಳಾಲ ದರ್ಗಾಕ್ಕೆ ಜಾತಿ, ಧರ್ಮದ ಎಲ್ಲೆ ಇಲ್ಲ. ಇದು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ದರ್ಗಾವಾಗಿದೆ.
ನಮ್ಮ ಸರ್ಕಾರದ ಕಾರ್ಯಕ್ರಮಗಳೂ ಸರ್ವ ಧರ್ಮ, ಸರ್ವ ಜಾತಿಯವರಿಗೆ ಸಲ್ಲುವಂಥವು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read