BIG NEWS: ಮೂರ್ನಾಲ್ಕು ದಿನಗಳಲ್ಲಿ ‘ಕೈ’ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ರಿಲೀಸ್

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಈಗಾಗಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಎರಡನೇ ಪಟ್ಟಿ ಇನ್ನು ಮೂರ್ನಾಲ್ಕು ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಮೂಲಗಳು ಹೇಳಿವೆ.

ಎರಡನೇ ಪಟ್ಟಿಯಲ್ಲಿ 70 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುತ್ತದೆ ಎನ್ನಲಾಗಿದ್ದು, ಬಹುತೇಕ ಹೆಚ್ಚಿನ ಆಕಾಂಕ್ಷಿಗಳಿಲ್ಲದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ. ಅಲ್ಲದೆ ಇತ್ತೀಚೆಗೆ ಪಕ್ಷ ಸೇರ್ಪಡೆಗೊಂಡಿರುವ ಇತರೆ ಪಕ್ಷಗಳ ಶಾಸಕರಿಗೂ ಅವಕಾಶ ನೀಡಬೇಕಿದೆ.

ಈ ಹಿನ್ನೆಲೆಯಲ್ಲಿ ಅಳೆದು ತೂಗಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತಿದ್ದು, ಆಂತರಿಕ ಸಮೀಕ್ಷೆಯನ್ನು ಆಧರಿಸಿ ಗೆಲ್ಲುವ ಸಾಮರ್ಥ್ಯವಿರುವವರಿಗೆ ಮಣೆ ಹಾಕಲಾಗುತ್ತದೆ ಎಂದು ಹೇಳಲಾಗಿದೆ. ಇದರ ಜೊತೆಗೆ ಟಿಕೆಟ್ ವಂಚಿತರಾದವರ ಮುನಿಸನ್ನೂ ಕೂಡ ಶಮನ ಮಾಡಬೇಕಾದ ಒತ್ತಡದಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read