BIG NEWS: ಮೂವರು PDO ಗಳು ಸಸ್ಪೆಂಡ್

ಹಾಸನ: ಖಾಸಗಿ ವ್ಯಕ್ತಿಗಳಿಗೆ ನಿವೇಶನ ಮಾಡಿಕೊಟ್ಟ ಆರೋಪದಲ್ಲಿ ಮೂವರು ಪಿಡಿಓಗಳನ್ನು ಅಮಾನತುಗೊಳಿಸಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.

ಬಳದರೆ ಗ್ರಾಮ ಪಂಚಾಯತ್ ನ ಪಿಡಿಓ ಸಿ.ಎನ್. ನವೀನ್ ಕೆಂಬಾಳು, ಬಾಗೂರು ಪಿಡಿಓ ಕೃಷ್ಣೇಗೌಡ, ಡಿಂದಗೂರು ಪಿಡಿಓ ರಾಮಸ್ವಾಮಿ ಅಮಾನತುಗೊಂಡವರು.

ಸಾರ್ವಜನಿಕರ ಉದ್ದೇಶಕ್ಕಾಗಿ ಮೀಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಗಳಿಗೆ ಮಾಡಿಕೊಟ್ಟಿದ್ದಾರೆ ಎಂಬ ಆರೋಪ ಮೂವರು ಪಿಡಿಓ ಗಳ ವಿರುದ್ಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಪೂರ್ಣಿಮಾ ಮೂವರು ಪಿಡಿಓಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read