HomeKarnatakaBIG NEWS: ಮೃತ ಶಿಕ್ಷಕನ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ನೀಡಿದ ವಿಪಕ್ಷ ನಾಯಕ

BIG NEWS: ಮೃತ ಶಿಕ್ಷಕನ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ನೀಡಿದ ವಿಪಕ್ಷ ನಾಯಕ

ಬೆಂಗಳೂರು: ಪ್ರತಿಭಟನಾ ನಿರತ ಶಿಕ್ಷಕ ಸಿದ್ದಯ್ಯ ಹಿರೇಮಠ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಶಿಕ್ಷಕನ ಕುಟುಂಬಕ್ಕೆ ಪರಿಹಾರ ನೀಡಿದ್ದಾರೆ.

ವೇತನ ಹೆಚ್ಚಳ, ಪಿಂಚಣಿಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಶಿಕ್ಷಕ ಸಿದ್ದಯ್ಯ ಸಾವನ್ನಪ್ಪಿದ್ದರು. ಮೃತ ಶಿಕ್ಷಕನ ನಿವಾಸಕ್ಕೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ, 2 ಲಕ್ಷ ರೂಪಾಯಿ ಧನ ಸಹಾಯ ನೀಡಿದ್ದಾರೆ.

ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಶಿಕ್ಷಕರು ಪ್ರತಿಭಟನೆ ನಡೆಸಿದ್ದು, ಬೇಸತ್ತ ಇಬ್ಬರು ಶಿಕ್ಷಕರು ಸಾವಿಗೆ ಶರಣಾಗಿದ್ದಾರೆ. ರಾಜ್ಯ ಸರ್ಕಾರ ಶಿಕ್ಷಕರ ಬೇಡಿಕೆ ಈಡೇರಿಸಬೇಕು. ಹಾಗೂ ಮೃತ ಶಿಕ್ಷಕರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಈ ವೇಳೆ ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular