BIG NEWS: ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮತ್ತೆ ಬ್ರ್ಯಾಂಡ್ ಮೌಲ್ಯ: ಕರ್ನಾಟಕದ ಹೆಮ್ಮೆಯ ಉತ್ಪನ್ನವಾಗಿಸಲು ಪರಿಣಿತರಿಂದ ಸಲಹೆಗೆ ಆಹ್ವಾನ

ಬೆಂಗಳೂರು: ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮತ್ತೆ ಬ್ರ್ಯಾಂಡ್ ಮೌಲ್ಯ ತಂದುಕೊಟ್ಟು, ಕರ್ನಾಟಕದ ಹೆಮ್ಮೆಯ ಉತ್ಪನ್ನವಾಗಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಉದ್ಯಮ ಪರಿಣತರಿಂದ ಸಲಹೆಗಳನ್ನು ಆಹ್ವಾನಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಮೈಸೂರು ಸ್ಯಾಂಡಲ್‌ ಸೋಪ್‌, ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಆರಂಭಿಸಿದ ಉತ್ಪನ್ನವಾಗಿದೆ. ಅದು ರಾಜ್ಯದ ಮುಕುಟಮಣಿಯ ಅನರ್ಘ್ಯರತ್ನವಾಗಿದೆ. ಅವರ ಆಶಯಕ್ಕೆ ತಕ್ಕಂತೆ ಈ ಹೆಜ್ಜೆ ಇಡಲು ತೀರ್ಮಾನಿಸಲಾಗಿದೆ. ಉದ್ಯಮಿಗಳು ಈ ನಿಟ್ಟಿನಲ್ಲಿ ಸೂಕ್ತ ಸಲಹೆಗಳನ್ನು ಕೊಟ್ಟು, ಸರಕಾರದ ಈ ಪ್ರಯತ್ನಕ್ಕೆ ಕೈಗೂಡಿಸಬೇಕು ಎಂದು ಸಚಿವ ಎಂ.ಬಿ. ಪಾಟೀಲ್ ಕರೆ ನೀಡಿದ್ದಾರೆ.

ಮೈಸೂರು ಸ್ಯಾಂಡಲ್‌ ಸೋಪ್‌ ನ್ನು ರಾಜ್ಯದ ಮಾರುಕಟ್ಟೆಯಲ್ಲೂ ಸಿಂಹಪಾಲು ಹೊಂದುವಂತೆ ಮಾಡಲು ಹಾಗೂ ಪ್ರಸ್ತುತ ದಕ್ಷಿಣ ಭಾರತಕ್ಕಷ್ಟೇ ಸೀಮಿತವಾಗಿ ಶೇಕಡ 3ರಷ್ಟು ಮಾತ್ರ ರಫ್ತು ವಹಿವಾಟಿನಲ್ಲಿರುವ ಸೋಪನ್ನು ರಾಷ್ಟ್ರ ಮಟ್ಟದಲ್ಲೂ ಹೆಸರುವಾಸಿ ಮಾಡಲು ಈ ನಿರ್ಧಾರ ಕೈಗೊಳ್ಳಲಾಗಿದೆ. ನಮ್ಮ ಬಳಿ ಮೈಸೂರು ಸ್ಯಾಂಡಲ್‌ ಸೋಪ್‌ನಂತಹ ಉತ್ಕೃಷ್ಟ ಉತ್ಪನ್ನದ ಹೆಮ್ಮೆಯ ಉತ್ಪನ್ನಕ್ಕೆ ಮರುಜೀವ ತುಂಬಿ, ಮಾರುಕಟ್ಟೆಯನ್ನು ಸೃಷ್ಟಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಸಲಹೆ ಸೂಚನೆ ನೀಡಲು ಕೋರಿದ್ದಾರೆ. ಆಸಕ್ತರು karnatakavision2030@gmail.comಗೆ ತಮ್ಮ ಸಲಹೆಗಳನ್ನು ಕಳಿಸಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read