HomeKarnatakaBIG NEWS: ಮೊದಲ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಬಿ.ವೈ.ವಿಜಯೇಂದ್ರ ಆಸ್ತಿ ಎಷ್ಟು?

BIG NEWS: ಮೊದಲ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಬಿ.ವೈ.ವಿಜಯೇಂದ್ರ ಆಸ್ತಿ ಎಷ್ಟು?

ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಇದೇ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದು, ಶಿಕಾರಿಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈಗಾಗಲೇ ವಿಜಯೇಂದ್ರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಮಪತ್ರದಲ್ಲಿ ವಿಜಯೇಂದ್ರ ತಮ್ಮ ಬಳಿ ಇರುವ ಆಸ್ತಿ ವಿವರ ಸಲ್ಲಿಸಿದ್ದಾರೆ. ಬಿ.ವೈ.ವಿಜಯೇಂದ್ರ ಹಾಗೂ ಪತ್ನಿ ಪ್ರೇಮಾ ಬಳಿ ಇರುವ ಆಸ್ತಿ ಮೌಲ್ಯ 126.18 ಕೋಟಿ ರೂಪಾಯಿ. ಆದರೆ ದಂಪತಿ ಬಳಿ ಒಂದೇ ಒಂದು ಸ್ವಂತ ಕಾರು ಇಲ್ಲ ಎಂಬುದು ಗಮನಾರ್ಹ.

ವಿಜಯೇಂದ್ರ 46.82 ಕೋಟಿ ರೂ ಮೌಲ್ಯದ ಚರಾಸ್ತಿ, ಪತ್ನಿ 7.85 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ದಂಪತಿ ಬಳಿ 70.11 ಕೋಟಿ ಮೌಲ್ಯದ ಸ್ಥಿರಾಸ್ತಿ ಇದೆ ಎಂದು ನಾಮಿನೇಷನ್ ನಲ್ಲಿ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1.75 ಲಕ್ಷ ಮೌಲ್ಯದ ಟ್ರ್ಯಾಕ್ಟರ್, ಟ್ರೇಲರ್, ಒಟ್ಟು 2.29 ಕೋಟಿ ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ವಸ್ತುಗಳಿವೆ. ಶಿಕಾರಿಪುರದಲ್ಲಿ ಕೃಷಿ ಭೂಮಿ, ದೊಡ್ಡಬಳ್ಳಾಪುರ, ರಾಮನಗರ, ಶಿಕಾರಿಪುರ, ಶಿವಮೊಗ್ಗ, ಕಲಬುರ್ಗಿ ಹಾಗೂ ಬೆಂಗಳೂರಿನಲ್ಲಿ ಕೃಷಿಯೇತರ ಭೂಮಿ ಹೊಂದಿದ್ದಾರೆ. ಇನ್ನು ತಮ್ಮ ವಿರುದ್ಧ 2 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular