BIG NEWS: ಯಡಿಯೂರಪ್ಪ ನಮ್ಮ ರಾಜಾ ಹುಲಿಯಾದರೆ, ವಿಜಯೇಂದ್ರ ಹೆಬ್ಬುಲಿ ಎಂದ ಶಾಸಕ

ಚಾಮರಾಜನಗರ: ಶಾಸಕ ರಾಜುಗೌಡ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಹಾಡಿಹೊಗಳಿದ್ದಾರೆ.

ಯುವ ಸಮಾವೇಶದಲ್ಲಿ ಮಾತನಾಡಿದ ಶಾಸಕ ರಾಜುಗೌಡ, ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ವಿಜಯೇಂದ್ರ ಪಕ್ಷ ಸಂಘಟನೆಯಲ್ಲಿ ನಿರತರಾಗಿದ್ದಾರೆ. ಯಡಿಯೂರಪ್ಪನವರು ನಮ್ಮ ರಾಜಾಹುಲಿಯಾದರೆ, ವಿಜಯೇಂದ್ರ ಇಂದು ಹೆಬ್ಬುಲಿಯಾಗಿ ಬೆಳೆದಿದ್ದಾರೆ ಎಂದು ಶ್ಲಾಘಿಸಿದರು.

ಎಲ್ಲರನ್ನೂ ಒಗ್ಗಟ್ಟಿನಿಂದ ಕರೆದುಕೊಂಡು ಹೋಗುವ ಪಕ್ಷ ಬಿಜೆಪಿ. ವಿಜಯೇಂದ್ರ ಪವರ್ ಫುಲ್ ಲೀಡರ್ ಆಗಲು ಜನರು ಬೆಂಬಲಿಸಬೇಕು. ಬಿಜೆಪಿಯನ್ನು ಹೆಮ್ಮರವನ್ನಾಗಿ ಬೆಳೆಸಲು ಸಹಕಾರ ನೀಡಬೇಕು ಎಂದರು.

ಕಾಂಗ್ರೆಸ್ ಪಕ್ಷ 70 ವರ್ಷಗಳಿಂದ ಮೀಸಲಾತಿ ಹೆಚ್ಚಳ ಮಾಡಿರಲಿಲ್ಲ. ಆದರೆ ಬಿಜೆಪಿ ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿದೆ. ಸಮಾಜದ ಬಂಧುಗಳು ಇದನ್ನು ಮರೆಯಬಾರದು ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read