BIG NEWS: ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಕೇಸ್; 6 ಜನರ ವಿರುದ್ಧ FIR ದಾಖಲು

ಮೈಸೂರು: ಮೈಸೂರಿನ ಟಿ.ನರಸಿಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಹನುಮಜಯಂತಿ ದಿನ ಭಾನುವಾರ ರಾತ್ರಿ ಗುಂಪುಘರ್ಷಣೆ ನಡೆದು ದುಷ್ಕರ್ಮಿಗಳು ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ಟಿ.ನರಸಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು 6 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.

ಟಿ.ನರಸಿಪುರ ನಿವಾಸಿಗಳಾದ ಮಣಿಕಂಠ, ಸಂದೇಶ್, ಶಂಕರೇಗೌಡ, ಅನಿಲ್, ಮಂಜು ಹಾಗೂ ಹ್ಯಾರಿಸ್ ಎಂಬುವವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕೊಲೆ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read