BIG NEWS: ರಾಜೀನಾಮೆ ನೀಡಿದ್ದೇನೆ ಎಂದ ಕೆಲ ಹೊತ್ತಲ್ಲೇ ಉಲ್ಟಾ ಹೊಡೆದ ಬಿಜೆಪಿ ರಾಜ್ಯಾಧ್ಯಕ್ಷ; ನಾನು ರಾಜೀನಾಮೆ ಕೊಟ್ಟಿಲ್ಲ ಎಂದು ಸ್ಪಷ್ಟನೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿಲ್ಲ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ

ವಿಧಾನಸಭಾ ಚುನಾವಣೆ ಸೋಲಿನ ಬಳಿಕ ರಾಜೀನಾಮೆ ನೀಡಿದ್ದೇನೆ ಎಂದು ಬೆಳಿಗ್ಗೆಯಷ್ಟೇ ಬಳ್ಳಾರಿಯಲ್ಲಿ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಕಲವೇ ಹೊತ್ತಲ್ಲಿ ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ನಳೀನ್ ಕುಮಾರ್ ಕಟೀಲ್, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ. ಚುನಾವಣೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಬಗ್ಗೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ ಎಂದಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ನಾನು ರಾಜ್ಯಾಧ್ಯಕ್ಷ ಸ್ಥಾನದಲ್ಲಿದ್ದೇನೆ. ರಾಜ್ಯಾಧ್ಯಕ್ಷರ ನೇಮಕದ ಬಗ್ಗೆ ಸೂಕ್ತ ಸಂದರ್ಭದಲ್ಲಿ ಪಕ್ಷ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read