BIG NEWS : ರಾಜ್ಯದಲ್ಲಿ ಬಜೆಟ್ ನಲ್ಲಿ `ಬ್ರ್ಯಾಂಡ್ ಬೆಂಗಳೂರಿಗೆ’ ಸಿಗುತ್ತಾ ಭರಪೂರ ಕೊಡುಗೆ ?

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ `ಬ್ರ್ಯಾಂಡ್ ಬೆಂಗಳೂರು’ಗೆ ಭರಪೂರ ಕೊಡುಗೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕನಸಾಗಿರುವ ಬ್ರ್ಯಾಂಡ್ ಬೆಂಗಳೂರು ಸಂಬಂಧ ಈಗಾಗಲೇ ಸರ್ವಪಕ್ಷ ಶಾಸಕರ ಜೊತೆಗೆ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರ ಜೊತೆಗೆ ಸಭೆ ನಡೆಸಿ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದು, ವರದಿಯನ್ನು ಸಿಎಂ ಸಿದ್ದರಾಮಯ್ಯಗೆ ಒಪ್ಪಿಸಿದ್ದು, ಇಂದು ಬಜೆಟ್ ನಲ್ಲಿ ಬ್ರ್ಯಾಂಡ್ ಬೆಂಗಳೂರಿಗೆ ಭರಪೂರ ಕೊಡುಗೆ ನೀಡುವ ಸಾಧ್ಯತೆ ಇದೆ.

ಬೆಂಗಳೂರಿನ ಅಭಿವೃದ್ಧಿಗಾಗಿ ಸಂಚಾರ ಯುಕ್ತ ಬೆಂಗಳೂರು, ಹಸಿರು ಬೆಂಗಳೂರು, ಸ್ವಚ್ಛ ಬೆಂಗಳೂರು, ಜನಸ್ನೇಹಿ ಬೆಂಗಳೂರು, ಆರೋಗ್ಯಕರ ಬೆಂಗಳೂರು, ಟೆಕ್ ಬೆಂಗಳೂರು ಹಾಗೂ ಜಲಸುರಕ್ಷಾ ಬೆಂಗಳೂರು ಕುರಿತು ಬ್ರ್ಯಾಂಡ್ ಬೆಂಗಳೂರು ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read