HomeKarnatakaBIG NEWS: ರಾಜ್ಯದಲ್ಲಿ ಮತ್ತೆ ನೂರಕ್ಕೂ ಅಧಿಕ ಮಂದಿಗೆ ಕೊರೊನಾ 'ಸೋಂಕು'

BIG NEWS: ರಾಜ್ಯದಲ್ಲಿ ಮತ್ತೆ ನೂರಕ್ಕೂ ಅಧಿಕ ಮಂದಿಗೆ ಕೊರೊನಾ ‘ಸೋಂಕು’

ರಾಜ್ಯದಲ್ಲಿ ಹಲ ತಿಂಗಳುಗಳಿಂದ ತೀವ್ರ ಇಳಿಕೆ ಕಂಡಿದ್ದ ಕೊರೊನಾ ಸೋಂಕಿನ ಪ್ರಕರಣಗಳು ಕಳೆದ ಕೆಲ ದಿನಗಳಿಂದ ಮತ್ತೆ ಏರಿಕೆಯಾಗುತ್ತಿದೆ. ಶುಕ್ರವಾರದಂದು ಒಂದೇ ದಿನ 131 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಐ ಎಲ್ ವಿ, ಜ್ವರ, ಅಧಿಕ ರಕ್ತದೊತ್ತಡ ಸಮಸ್ಯೆಗಳಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು, ಶುಕ್ರವಾರ 126 ಮಂದಿ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶುಕ್ರವಾರದ ವೇಳೆಗೆ ಕಳೆದ 24 ಗಂಟೆಗಳ ಅವಧಿಯಲ್ಲಿ 5,179 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, 131 ಮಂದಿಗೆ ಸೋಂಕು ದೃಢಪಟ್ಟಿತ್ತು. ಈ ಪೈಕಿ ಬೆಂಗಳೂರು 61, ಶಿವಮೊಗ್ಗ 27, ಚಿಕ್ಕಮಗಳೂರು 13, ಮೈಸೂರು 5, ಬಳ್ಳಾರಿ, ಹಾಸನ ತಲಾ 4 ಮಂದಿಗೆ ಸೋಂಕು ತಗುಲಿದೆ ಎಂದು ಮೂಲಗಳು ತಿಳಿಸಿವೆ.

For Latest News Updates, Join Our Whatsapp Community🚩
RELATED ARTICLES

Most Popular