HomeKarnatakaBIG NEWS: ರಾಜ್ಯದಲ್ಲಿ ವರುಣಾರ್ಭಟಕ್ಕೆ ಒಂದೇ ದಿನ 7 ಜನ ಬಲಿ

BIG NEWS: ರಾಜ್ಯದಲ್ಲಿ ವರುಣಾರ್ಭಟಕ್ಕೆ ಒಂದೇ ದಿನ 7 ಜನ ಬಲಿ

ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಸಂಭವಿಸಿದ ಮಹಾಮಳೆಗೆ ಒಂದೇ ದಿನದಲ್ಲಿ 7 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ರಾಜಧಾನಿ ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ಯುವತಿ ಭಾನುರೇಖಾ ಸಾವನ್ನಪ್ಪಿದ್ದಾರೆ. ಇದೇ ವೇಳೆ ಕೆ.ಪಿ.ಅಗ್ರಹಾರ ರಾಜಕಾಲುವೆಯಲ್ಲಿ ಲೋಕೇಶ್ ಎಂಬ ಯುವಕ ಕೊಚ್ಚಿ ಹೋಗಿದ್ದಾನೆ. ಇಂದು ಬೆಳಿಗ್ಗೆ ಆತನ ಶವ ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೈಸೂರಿನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಓರ್ವ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದರೆ, ಮೈಸೂರಿನ ಮಂಟಿಕೊಪ್ಪಲದಲ್ಲಿ ಸಿಡಿಲು ಬಡಿದು ರೈತ ಸಾವನ್ನಪ್ಪಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಸಿಡಿಲು ಬಡಿದು ಯುವಕ ಬಲಿಯಾಗಿದ್ದಾನೆ.

ಚಿಕ್ಕಮಗಳೂರಿನಲ್ಲಿ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಒಂದೇ ದಿನ ಒಟ್ಟು 7 ಜನರು ಮಹಾಮಳೆಗೆ ಬಲಿಯಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular