ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಲಿಕಾ ದೀಪ ಕಾರ್ಯಕ್ರಮ ಅನುಷ್ಟಾನಗೊಳಿಸಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಕಾರ್ಯನಿರತ ಕಂಪ್ಯೂಟರ್ ಸೌಲಭ್ಯ ಹೊಂದಿರುವ ರಾಜ್ಯದ ಸುಮಾರು 1,145 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಯನ್ನು ಆತ್ಮವಿಶ್ವಾಸದಿಂದ ಓದಲು ಮತ್ತು ಗಣಿತದ ಆರಂಭಿಕ ಸಾಮರ್ಥ್ಯಗಳಿಸಲು ಏಕ್ ಸೈಪ್ (EkStep) ಫೌಂಡೇಷನ್ ಸಂಸ್ಥೆಯ ಸಹಯೋಗದೊಂದಿಗೆ ಕೃತಕ ಬುದ್ಧಿಮತ್ತೆ (Artificial Intelligence) ಆಧಾರಿತ “ಕಲಿಕಾ ದೀಪ” ಕಾರ್ಯಕ್ರಮವನ್ನು 4 ರಿಂದ 6ನೇ ತರಗತಿಯಲ್ಲಿ ಓದುತ್ತಿರುವ ಸುಮಾರು 1,44,062 ವಿದ್ಯಾರ್ಥಿಗಳಿಗಾಗಿ ಅನುಷ್ಠಾನಗೊಳಿಸಲು ಸಮಗ್ರ ಶಿಕ್ಷಣ ಕರ್ನಾಟಕದ ವಾರ್ಷಿಕ ಕ್ರಿಯಾ ಯೋಜನೆ ಮತ್ತು ಆಯವ್ಯಯ 2025-26ರ (AWP&B) ರಲ್ಲಿನ Elementary Head (5.10.1) , TLM Component (Class III -V) ಅನುಮೋದನೆಯಾಗಿರುವ ಒಟ್ಟು ಮೊತ್ತ ರೂ.4481.706 ಲಕ್ಷಗಳಲ್ಲಿ ಕಾರ್ಯಕ್ರಮದ ಅಂದಾಜು ವೆಚ್ಚ ರೂ.138.10 ಲಕ್ಷಗಳನ್ನು ಭರಿಸಿ, ಹಾಗೂ ಕಾರ್ಯಕ್ರಮದ ಅನುಷ್ಠಾನದಲ್ಲಿ ಪಾಲ್ಗೊಳ್ಳುವ ಪ್ರಧಾನ ಸಂಪನ್ಮೂಲ ವ್ಯಕ್ತಿಗಳಿಗೆ (Master Resource Person) ಅರ್ಹತೆಯಂತೆ ಪ್ರಯಾಣ ಭತ್ಯೆ (TA DA) Karnataka Direct Benefit Transfer (DBT) Portal ಮುಖಾಂತರ ನೇರ ನಗದು ವರ್ಗಾವಣೆ (DBT) ಮೂಲಕ ಆಧಾರ್ ಜೋಡಣೆಯಾಗಿರುವ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಖಜಾನೆ-2 ಯಿಂದ ವರ್ಗಾಯಿಸಲು ರಾಜ್ಯ ಯೋಜನಾ ನಿರ್ದೇಶಕರು, ಸಮಗ್ರ ಶಿಕ್ಷಣ ಕರ್ನಾಟಕ, ಬೆಂಗಳೂರು ಇವರಿಗೆ ಈ ಕೆಳಕಂಡ ಷರತ್ತುಗಳು ಮತ್ತು ನಿಬಂಧನೆಗಳಿಗೆ ಒಳಪಟ್ಟು ಅನುಮತಿ ನೀಡಿ ಆದೇಶಿಸಿದೆ.





