BIG NEWS: ರಾಜ್ಯ ಬಜೆಟ್ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್

ಬೆಂಗಳೂರು: ಬಜೆಟ್ ಅಧಿವೇಶನ ಫೆಬ್ರವರಿ 10 ರಿಂದ ಆರಂಭವಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಫೆಬ್ರವರಿ 10ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಅಂದು ರಾಜ್ಯಪಾಲರು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ನಂತರದ ದಿನಗಳಲ್ಲಿ ಅವರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಫೆ.17ರಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು 2023-24ನೇ ಸಾಲಿನ ಆಯವ್ಯಯ ಮಂಡಿಸಲಿದ್ದಾರೆ ಎಂದರು.

ಎಷ್ಟು ದಿನ ಅಧಿವೇಶನ ನಡೆಸಬೇಕು ಎಂಬ ಬಗ್ಗೆ ಬಿಎಸಿ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read