HomeKarnatakaBIG NEWS: ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಸಿದ್ದರಾಮಯ್ಯ ಹೇಳಿಕೆ

BIG NEWS: ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಸಿದ್ದರಾಮಯ್ಯ ಹೇಳಿಕೆ

ಚಿತ್ರದುರ್ಗ: ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಕ್ಷೇತ್ರ ಗೊಂದಲದಲ್ಲಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಇದೇ ವೇಳೆ ಸಿದ್ದರಾಮಯ್ಯ ನೀಡಿರುವ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿ ಮಾಡಿದೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಚುನಾವಣೆಯಲ್ಲಿ ಸ್ಪರ್ಧೆಗೆ 25 ಕ್ಷೇತ್ರಗಳಿಂದ ಆಹ್ವಾನ ಬಂದಿದೆ. ಆದರೆ ಎಲ್ಲಾ ಕ್ಷೇತ್ರಗಳಿಂದ ಸ್ಪರ್ಧಿಸಲು ಸಾಧ್ಯವಿಲ್ಲ. ನಮ್ಮ ಮನೆಯಲ್ಲಿ ವರುಣಾದಿಂದ ಸ್ಪರ್ಧೆ ಮಾಡುವಂತೆ ಹೇಳುತ್ತಿದ್ದಾರೆ. ಹಾಗಾಗಿ ವರುಣಾ ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಹೇಳಿದ್ದೇನೆ. ವರುಣಾದ ಜೊತೆಗೆ ಇನ್ನೊಂದು ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆಯೂ ಒತ್ತಾಯಿಸುತ್ತಿದ್ದಾರೆ. ಎಲ್ಲವನ್ನೂ ಹೈಕಮಾಂಡ್ ಗೆ ಬಿಟ್ಟಿದ್ದೇನೆ ಎಂದು ತಿಳಿಸಿದ್ದಾರೆ.

ಈ ಮೂಲಕ ವರುಣಾ ಕ್ಷೇತ್ರದ ಜೊತೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೊಂದು ಕ್ಷೇತ್ರದಿಂದಲೂ ಸ್ಪರ್ಧೆಗೆ ಮುಂದಾಗುವ ಸಾಧ್ಯತೆ ದಟ್ಟವಾಗಿದ್ದು, ಎರಡನೇ ಕ್ಷೇತ್ರವಾಗಿ ಬಾದಾಮಿ ಆಯ್ಕೆ ಮಾಡಿಕೊಳ್ಳುತ್ತಾರಾ ಅಥವಾ ಕೋಲಾರವನ್ನು ಆಯ್ಕೆ ಮಾಡಿಕೊಳ್ಳಲಿದ್ದಾರಾ ಎಂಬ ಕುತೂಹಲ ಮೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular