HomeKarnatakaBIG NEWS: ರೂಪಾ ಮೌದ್ಗಿಲ್ ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ವರ್ತಿಸುತ್ತಿದ್ದಾರೆ; ರೋಹಿಣಿ ಸಿಂಧೂರಿ ಆಕ್ರೋಶ

BIG NEWS: ರೂಪಾ ಮೌದ್ಗಿಲ್ ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ವರ್ತಿಸುತ್ತಿದ್ದಾರೆ; ರೋಹಿಣಿ ಸಿಂಧೂರಿ ಆಕ್ರೋಶ

ಬೆಂಗಳೂರು: ಐ ಎ ಎಸ್ ಅಧಿಕಾರಿ ರೂಹಿಣಿ ಸಿಂಧೂರಿ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿ, ಫೋಟೋ ವೈರಲ್ ಮಾಡಿರುವ ವಿಚಾರವಾಗಿ ತಿರುಗೇಟು ನೀಡಿರುವ ರೋಹಿಣಿ ಸಿಂಧೂರಿ, ಡಿ.ರೂಪಾ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ವರ್ತಿಸುತ್ತಿದ್ದಾರೆ ಎಂದಿದ್ದಾರೆ.

ತಮ್ಮ ವಿರುದ್ಧದ ಆರೋಪಗಳಿಗೆ ಮೊದಲ ಬಾರಿ ಡಿ.ರೂಪಾ ವಿರುದ್ಧ ಮೌನ ಮುರಿದ ರೋಹಿಣಿ ಸಿಂಧೂರಿ, ಡಿ.ರೂಪಾ ಆಧಾರ ರಹಿತ ಸುಳ್ಳು ಆರೋಪಗಳನ್ನು ಮಾಡಿ ಮಾಧ್ಯಮದ ಗಮನ ಸೆಳೆಯುತ್ತಿದ್ದಾರೆ. ಒಳ್ಳೆಯ ಕೆಲಸಗಳ ಕಡೆ ಗಮನ ಹರಿಸುವುದನ್ನು ಬಿಟ್ಟು ಇನ್ನೊಬ್ಬರ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಡಿ.ರೂಪಾ ವೈಯಕ್ತಿಕ ನಿಂದನೆ, ತೇಜೋವಧೆ ಮಾಡುತ್ತಿದ್ದಾರೆ. ವೈಯಕ್ತಿಕ ನಿಂದನೆ, ತೇಜೋವಧೆ ವಿರುದ್ಧ ಐಪಿಎಸ್ ಸೆಕ್ಷನ್ ಗಳ ಅಡಿ ಕಾನೂನು ಕ್ರಮ ಕೈಗೊಳ್ಳುವಂತೆ ಸಕ್ಷಮ ಪ್ರಾಧಿಕಾರದ ಮುಂದೆ ದೂರು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ಡಿ.ರೂಪಾ ವಿರುದ್ಧ ಕೇಸ್ ದಾಖಲಿಸಲು ರೋಹಿಣಿ ಮುಂದಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular