ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರದಲ್ಲಿ ಈ ಬಾರಿ ಯಾವುದೇ ಬದಲಾವಣೆ ಮಾಡಿಲ್ಲ. ಯಥಾ ಸ್ಥಿತಿಯಲ್ಲಿ ಮುಂದುವರೆಸುವುದಾಗಿ ತಿಳಿಸಿದೆ.
ಆರ್ ಬಿ ಐ ಹಣಕಾಸು ನೀತಿ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ ಬಿ ಐ ಗವರ್ನರ್ ಶಕ್ತಿಕಾಂತ್ ದಾಸ್, ರೆಪೋ ದರವನ್ನು ಶೇ.6.5 ರಲ್ಲಿಯೇ ಮುಂದುವರೆಸಲು ತೀರ್ಮಾನಿಸಲಾಗಿದೆ. ಹಾಗಾಗಿ ರೆಪೋ ದರ ಯಥಾಸ್ಥಿತಿ ಇರಲಿದೆ ಎಂದರು.
ರೆಪೋ ದರ ಮಾತ್ರವಲ್ಲ ರಿಸರ್ವ್ ರೆಪೋ ಮತ್ತಿತರ ದರಗಳಲ್ಲಿಯೂ ಯಾವುದೇ ಬದಲಾವಣೆಗಳಾಗಿಲ್ಲ. ಹಣದುಬ್ಬರ ಇಳಿಕೆಯಾಗಿದ್ದರೂ ಸಮಾಧಾನಪಡುವಂತಹ ಪರಿಸ್ಥಿತಿ ಇನ್ನೂ ಬಂದಿಲ್ಲ ಎಂದು ತಿಳಿಸಿದ್ದಾರೆ.
https://twitter.com/ani_digital/status/1666675727880663042