BIG NEWS: ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಗಡಿಪಾರು

ಬೆಂಗಳೂರು: ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ರಾಜಕಾರಣದಲ್ಲಿ ಸಕ್ರಿಯನಾಗಲು ಮುಂದಾಗಿದ್ದ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಪೊಲೀಸರು ಗಡಿಪಾರು ಮಾಡಿದ್ದಾರೆ.

ಚುನಾವಣೆ ಮುಗಿಯುವವರೆಗೂ ಬೆಂಗಳೂರಿಗೆ ಬರದಂತೆ ಗಡಿಪಾರು ಮಾಡಿ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ಆದೇಶಿಸಿದ್ದಾರೆ. ಚುನಾವಣೆ ಬಳಿಕ ಪೊಲೀಸ್ ವಿಚಾರಣೆಗೆ ಮಾತ್ರ ನಗರಕ್ಕೆ ಪ್ರವೇಶಿಸಬಹುದಾಗಿದೆ.

ರೌಡಿಶೀಟರ್ ನಾಗನ ವಿರುದ್ಧ ದರೋಡೆ, ಕೊಲೆ, ಸರಣಿ ವಾಹನ ಕಳುವು ಸೇರಿದಂತೆ ಹಲವು ಅಪರಾಧ ಪ್ರಕರಣಗಳಿವೆ. ಏಳು ಕೊಲೆ ಪ್ರಕರಣಗಳ ಆರೋಪವಿದೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read