HomeKarnatakaBIG NEWS: ಲಕ್ಷ್ಮಣ ಸವದಿ ಬಿಜೆಪಿಯಲ್ಲೇ ಇರ್ತಾರೆ ಎಂದ ಅರುಣ್ ಸಿಂಗ್; ಅವರ ನೇತೃತ್ವದಲ್ಲೇ ನನ್ನ...

BIG NEWS: ಲಕ್ಷ್ಮಣ ಸವದಿ ಬಿಜೆಪಿಯಲ್ಲೇ ಇರ್ತಾರೆ ಎಂದ ಅರುಣ್ ಸಿಂಗ್; ಅವರ ನೇತೃತ್ವದಲ್ಲೇ ನನ್ನ ಚುನಾವಣೆ ಎಂದ ಮಹೇಶ್ ಕುಮಟಳ್ಳಿ

ಬೆಂಗಳೂರು: ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ರಾಜಿನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಆದರೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸವದಿ ಬಿಜೆಪಿಯಲ್ಲಿಯೇ ಇರುತ್ತಾರೆ ಎಂದಿದ್ದಾರೆ.

ಲಕ್ಷ್ಮಣ ಸವದಿ ಬಿಜೆಪಿ ತೊರೆಯುವ ನಿರ್ಧಾರ ವಿಚಾರವಾಗಿ ಮಾತನಾಡಿದ ಅರುಣ್ ಸಿಂಗ್, ಲಕ್ಷ್ಮಣ ಸವದಿ ಬಿಜೆಪಿ ಹಿರಿಯ ನಾಯಕರು. ಅವರು ಪಕ್ಷದಲ್ಲೇ ಇರುತ್ತಾರೆ. ಪಕ್ಷದ ನಿಲುವಿನಲ್ಲಿ ಟಿಕೆಟ್ ಘೋಷಣೆ ಮಾಡಲಾಗಿದೆ. ಯಾವುದೇ ಗೊಂದಲವಿಲ್ಲ, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಾರೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.

ಈ ನಡುವೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅಥಣಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ, ಲಕ್ಷ್ಮಣ ಸವದಿ ನೇತೃತ್ವದಲ್ಲಿಯೇ ಚುನಾವಣೆಯನ್ನು ಎದುರಿಸುತ್ತೇನೆ. ಅವರ ನೇತೃತ್ವದಲ್ಲೇ ನನ್ನ ಚುನಾವಣೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular