HomeIndiaBIG NEWS: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ನನಗಿಲ್ಲ; ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿಕೆ

BIG NEWS: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ನನಗಿಲ್ಲ; ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿಕೆ

ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ಬಳಿಕ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದರು.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಅಣ್ಣಾಮಲೈ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರಾದರೂ ಪರಾಭವಗೊಂಡಿದ್ದರು. ತಮಿಳುನಾಡಿನಲ್ಲಿ ಬಿಜೆಪಿ ನೆಲೆಯೂರುವಂತೆ ಮಾಡಲು ಅಣ್ಣಾಮಲೈ ನಿರಂತರ ಪ್ರಯತ್ನ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೀವ ಬೆದರಿಕೆ ಹಿನ್ನೆಲೆಯಲ್ಲಿ ಅಣ್ಣಾಮಲೈ ಅವರಿಗೆ ಕೇಂದ್ರ ಸರ್ಕಾರ ಬಿಗಿ ಭದ್ರತೆ ನೀಡಿದ್ದು, ಇದರ ಮಧ್ಯೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಕುರಿತಂತೆ ಅಣ್ಣಾಮಲೈ ಮಹತ್ವದ ಹೇಳಿಕೆ ನೀಡಿದ್ದಾರೆ.

ಚೆನ್ನೈನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ತಾವು 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವುದೇ ನನ್ನ ಗುರಿ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular