HomeKarnatakaBIG NEWS: ಲೋಕಸಭಾ ಚುನಾವಣೆ: BJP-JDS ಮೈತ್ರಿ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು.....?

BIG NEWS: ಲೋಕಸಭಾ ಚುನಾವಣೆ: BJP-JDS ಮೈತ್ರಿ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು…..?

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಹಾಗೂ ಜೆಡಿಎಸ್ ನಡುವೆ ಮೈತ್ರಿ ವಿಚಾರದ ಮಾತುಕತೆಗಳು ನಡೆದಿದ್ದು, ತೀವ್ರ ಕುತೂಹಲ ಮೂಡಿಸಿದೆ.

ಈ ನಡುವೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದು, ಇನ್ನೂ ಸಮಯವಿದೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ಜೆ.ಪಿ.ನಗರದ ತಿರುಮಲಗಿರಿ ದೇವಸ್ಥಾನದಲ್ಲಿ ವಿಶೇಷ ಹೋಮ-ಹವನ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಬಿಜೆಪಿ ಜೊತೆ ಮೈತ್ರಿ ಬಗ್ಗೆ ಇನ್ನೂ ಸಮಯವಿದೆ ಎಂದು ಹೇಳಿದರು.

ಸಧ್ಯ ತಂದೆಯವರ ಆರೋಗ್ಯ ವೃದ್ಧಿಗಾಗಿ ಪೂಜೆ ಸಲ್ಲಿಸಿದ್ದೇನೆ. ನಮ್ಮ ಕುಟುಂಬದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆ, ಅನಾರೋಗ್ಯ ಕಾರಣದಿಂದಾಗಿ ಆರೋಗ್ಯ ವೃದ್ಧಿಗಾಗಿ ಪೂಜೆ ಮಾಡಿದ್ದೇನೆ. ಹಿಂದೂ ಧರ್ಮದ ಸಂಪ್ರದಾಯದಂತೆ ಧಾರ್ಮಿಕ ಪೂಜೆ ನೆರವೇರಿಸಿದ್ದೇನೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular