BIG NEWS: ಲೋಕಸಭೆ ಚುನಾವಣೆಯಲ್ಲಿ ರಾಘವೇಂದ್ರ ಗೆಲ್ಲಿಸಲು ಶಾಮನೂರು ಶಿವಶಂಕರಪ್ಪ ಕರೆ

ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸಲು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಕರೆ ನೀಡಿದ್ದಾರೆ.

ಬೆಕ್ಕಿನ ಕಲ್ಮಠದಲ್ಲಿ ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳ 112ನೇ ಪುಣ್ಯ ಸ್ಮರಣೋತ್ಸವ ಪ್ರಯುಕ್ತ ಆಯೋಜಿಸಿದ್ದ ಭಾವೈಕ್ಯ ಸಮ್ಮೇಳನ ಹಾಗೂ ಗುರು ಬಸವಶ್ರೀ ಪ್ರದಾನ ಸಮಾರಂಭದಲ್ಲಿ ಗುರು ಬಸವಶ್ರೀ ಪ್ರಶಸ್ತಿ ಪುರಸ್ಕಾರ ಸ್ವೀಕರಿಸಿ ಅವರು ಮಾತನಾಡಿದರು.

ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿದ್ದು, ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ, ಮುಂದೆಯೂ ಇವರನ್ನು ಆಯ್ಕೆ ಮಾಡಬೇಕಿರುವುದು ಸಾರ್ವಜನಿಕರ ಕರ್ತವ್ಯ. ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಿರುವ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ಅಭಿಪ್ರಾಯಪಟ್ಟರು.

ಬಿ.ವೈ.ರಾಘವೇಂದ್ರ ಅವರಂತಹ ಲೋಕಸಭೆ ಸದಸ್ಯರನ್ನುಪಡೆದ ನೀವೇ ಧನ್ಯರು. ಜಿಲ್ಲೆಯಲ್ಲಿ ಆಗಬೇಕಿರುವ ಎಲ್ಲ ಕೆಲಸಗಳನ್ನು ಪೂರ್ಣ ಮಾಡಿ ಮುನ್ನಡೆಯುತ್ತಿದ್ದಾರೆ. ಜನರಿಗೆ ಅಭಿವೃದ್ಧಿ ಕೆಲಸ ಆಗಬೇಕಿರುವುದು ಮೊದಲ ಆದ್ಯತೆ. ಜನರ ಅಭಿಲಾಷೆಯಂತೆ ಕೆಲಸ ಮಾಡಿರುವ ಲೋಕಸಭಾ ಸದಸ್ಯರನ್ನು ಬರುವ ಲೋಕಸಭೆ ಚುನಾವಣೆಯಲ್ಲಿಯೂ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ವೀರಶೈವ ಲಿಂಗಾಯತರಲ್ಲಿ ಅನೇಕ ಒಳ ಪಂಗಡಗಳಿವೆ, ಅವುಗಳು ದೂರವಾಗಿ ಎಲ್ಲರೂ ಒಂದೇ ಎಂಬ ಭಾವನೆ ಬರಬೇಕು ಆಗ ಐಕ್ಯತೆ ಮೂಡುತ್ತದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read