HomeKarnatakaBIG NEWS: ಲೋಕಾಯುಕ್ತ ದಾಳಿ ಕೇಸ್; ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದ ನಳೀನ್ ಕುಮಾರ್...

BIG NEWS: ಲೋಕಾಯುಕ್ತ ದಾಳಿ ಕೇಸ್; ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದ ನಳೀನ್ ಕುಮಾರ್ ಕಟೀಲ್

ಬೀದರ್: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಬೀದರ್ ನಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಲೊಕಾಯುಕ್ತ ಸಂಸ್ಥೆಯನ್ನು ಸಧೃಢ ಮಾಡಿದ್ದೇ ನಾವು. ತನಿಖೆಯಾಗಲಿ ಇದರಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭಾಗಿಯಾಗಿದ್ದರೆ ಅವರ ವಿರುದ್ಧವೂ ಖಂಡಿತಾ ಕ್ರಮ ಕೈಗೊಳ್ಳುತ್ತೇವೆ. ಮಾಡಾಳು ವಿರೂಪಾಕ್ಷಪ್ಪ ಪುತ್ರ ಸರ್ಕಾರಿ ಅಧಿಕಾರಿಯಾಗಿದ್ದಾರೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭ್ರಷ್ಟಾಚಾರದ ದಾಖಲೆ ಸಿಕ್ಕಿದ್ದಕ್ಕೇ ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿದ್ದು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಯಾಕೆ ರಾಜೀನಾಮೆ ನೀಡಲಿಲ್ಲ. ಮೊದಲು ಡಿಕೆಶಿ ರಾಜಿನಾಮೆ ಕೊಡಲಿ. ಆಮೇಲೆ ನೋಡೋಣ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular