HomeKarnatakaBIG NEWS: ವರುಣಾದಲ್ಲಿ ಸಿದ್ದರಾಮಯ್ಯರನ್ನು ಮುಗಿಸಲು ಕಾಂಗ್ರೆಸ್ ನಿಂದಲೇ ಹುನ್ನಾರ; ಟಾಂಗ್ ನೀಡಿದ ಸಿಎಂ ಬೊಮ್ಮಾಯಿ

BIG NEWS: ವರುಣಾದಲ್ಲಿ ಸಿದ್ದರಾಮಯ್ಯರನ್ನು ಮುಗಿಸಲು ಕಾಂಗ್ರೆಸ್ ನಿಂದಲೇ ಹುನ್ನಾರ; ಟಾಂಗ್ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಗಿಸಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿ ಎಲ್ಲರೂ ಯತ್ನ ನಡೆಸಿದ್ದಾರೆ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಸಿದ್ದರಾಮಯ್ಯ ಅವರನ್ನು ಮುಗಿಸಲು ಕಾಂಗ್ರೆಸ್ ನಿಂದಲೇ ಯತ್ನ ನಡೆದಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯನವರನ್ನು ಹೇಗೆ ಮುಗಿಸಿದ್ದಾರೆ ಎಂಬುದು ಗೊತ್ತಿಲ್ಲವೇ? ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಗಿಸಿದ್ರು. ಈಗ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಮುಗಿಸಲು ಏನು ಹುನ್ನಾರ ನಡೆಸಿದ್ದಾರೆ ಎಂಬುದು ಜಗತ್ತಿಗೆ ಗೊತ್ತಿದೆ ಎಂದರು.

ಕಾಂಗ್ರೆಸ್ ನವರೇ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಯತ್ನಿಸಿದ್ದಾರೆ. ಅವರು ಬಿಜೆಪಿ ಬಗ್ಗೆ ಆರೋಪ ಮಾಡುವ ಅಗತ್ಯವಿಲ್ಲ. ಅವರ ಆರೋಪಕ್ಕೆ ಉತ್ತರ ಕೊಡಬೇಕಾಗಿಯೂ ಇಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular