BIG NEWS: ವರುಣಾರ್ಭಟಕ್ಕೆ ಮತ್ತೊಂದು ಬಲಿ; ಮನೆ ಗೋಡೆ ಕುಸಿದು ಯುವಕ ದುರ್ಮರಣ

ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಹೆಚ್ಚಾಗಿದ್ದು, ಅವಾಂತರಗಳ ಸರಣಿ ಮುಂದುವರೆದಿದೆ. ಮನೆ ಗೋಡೆ ಕುಸಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ಈ ದುರಂತ ಸಂಭವಿಸಿದೆ. ಧಾರಾಕಾರ ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದಿದ್ದು, 23 ವರ್ಷದ ಯುವಕ ಕಾಶಿನಾಥ್ ಸುತಾರ್ ಸಾವನ್ನಪ್ಪಿದ್ದಾನೆ.

ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ನೆನೆದು ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read