BIG NEWS: ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ ಸೋನಿಯಾ ಗಾಂಧಿ

ಹುಬ್ಬಳ್ಳಿ: ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ಪಕ್ಷಗಳ ನಾಯಕರು ಮತದಾರರ ಮನಗೆಲ್ಲಲು ಕೊನೇ ಕ್ಷಣದ ಕಸರತ್ತು ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ ಮತಬೇಟೆಗಾಗಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಯೋಗಿ ಆದಿತ್ಯ ನಾಥ್ ರಾಜ್ಯದಲ್ಲಿ ಬೀಡು ಬಿಟ್ಟಿದ್ದರೆ, ಕಾಂಗ್ರೆಸ್ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರಕ್ಕಾಗಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ಚುನಾವಣಾ ಪ್ರಚಾರಕ್ಕಾಗಿ ಸೋನಿಯಾ ಗಾಂಧಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ.

ಹುಬ್ಬಳ್ಳಿ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಸೋನಿಯಾ ಗಾಂಧಿ, ಉತ್ತರ ಕರ್ನಾಟಕ ಭಾಗದ ರಾಜಕೀಯ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ನಾಯಕರಿಂದ ಮಾಹಿತಿ ಸಂಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read