ಬೆಂಗಳೂರು : ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ..! ಈ ವಾರ ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಈ ವಾರಾಂತ್ಯದೊಳಗೆ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸದ್ಯ, ರ್ಯಾಂಕಿಂಗ್ ಸಿದ್ದಪಡಿಸುವ ಕಾರ್ಯ ನಡೆಯುತ್ತಿದೆ. ಶೀಘ್ರದಲ್ಲೇ ಫಲಿತಾಂಶ ಪ್ರಕಟವಾಗಲಿದೆ.
ಸಿಬಿಎಸ್ಇ, ಐಸಿಎಸ್ಇ 12ನೇ ತರಗತಿ ಫಲಿತಾಂಶ ಮತ್ತು ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾದ ಬಳಿಕ ಸಿಇಟಿ ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದರು. ಅಂತೆಯೇ ಈಗಾಗಲೇ ಈ ಫಲಿತಾಂಶಗಳು ಪ್ರಕಟವಾಗಿವೆ.
ಈ ಫಲಿತಾಂಶ ಪರಿಗಣಿಸಿ ಸಂಬಂಧಿಸಿದ ವಿದ್ಯಾರ್ಥಿಗಳ ಸಿಇಟಿ ರ್ಯಾಂಕಿಂಗ್ ಸಿದ್ದಪಡಿಸುವ ಕಾರ್ಯ ನಡೆಯುತ್ತಿದೆ. ದ್ವಿತೀಯ ಪಿಯುಸಿ ಮತ್ತು ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿ ಪಡೆದಿರುವ ಅಂಕಗಳಲ್ಲಿ ತಲಾ ಶೇ.50 ರಷ್ಟು ಅಂಕಗಳನ್ನು ಒಟ್ಟುಗೂಡಿಸಿ ರ್ಯಾಂಕಿಂಗ್ ನೀಡಲಾಗುತ್ತದೆ.