HomeKarnatakaBIG NEWS: ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡವರಿಗೆ ಗೆಲುವಿನ 'ಸಿಹಿ' ಉಣಿಸಿದ ಮತದಾರ

BIG NEWS: ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡವರಿಗೆ ಗೆಲುವಿನ ‘ಸಿಹಿ’ ಉಣಿಸಿದ ಮತದಾರ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡ ಹಲವು ಅಭ್ಯರ್ಥಿಗಳು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಬಹುತೇಕರಿಗೆ ಗೆಲುವಿನ ದಡ ಸೇರಿಸುವ ಮೂಲಕ ಮತದಾರ ಸಿಹಿ ಉಣಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡ ವಿ. ಸೋಮಣ್ಣ, ಡಾ. ಸುಧಾಕರ್, ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಈ ಬಾರಿ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಕಣಕ್ಕಿಳಿದು ಗೆಲುವು ಸಾಧಿಸಿದ್ದಾರೆ.

ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಶ್ರೀರಾಮುಲು, ಲೋಕಸಭಾ ಚುನಾವಣೆಯಲ್ಲಿ ತಮ್ಮ ಅದೃಷ್ಟ ಪರೀಕ್ಷಿಸಲು ಹೋಗಿ ಮುಖಭಂಗ ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಬಳ್ಳಾರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಅವರು ಕಾಂಗ್ರೆಸ್ ನ ಇ. ತುಕಾರಾಂ ವಿರುದ್ಧ ಸೋಲನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular