BIG NEWS: ವಿಧಾನಸಭಾ ಚುನಾವಣೆ; ಬರೋಬ್ಬರಿ 265 ಕೋಟಿ ರೂ. ಜಪ್ತಿ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ರಾಜ್ಯಾದ್ಯಂತ ಚುನಾವಣಾಧಿಕಾರಿಗಳು ರಣಬೇಟೆ ನಡೆಸಿದ್ದಾರೆ. ಈವರೆಗೆ ಬರೋಬ್ಬರಿ 265 ಕೋಟಿ ರೂಪಾಯಿ ಹಣ ಜಪ್ತಿ ಮಾಡಲಾಗಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್, ರಾಜ್ಯದಲ್ಲಿ ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಈವರೆಗೆ 265 ಕೋಟಿ ಹಣ ಸೀಜ್ ಮಾಡಲಾಗಿದೆ ಎಂದರು.

ಅನಧಿಕೃತ ರ್ಯಾಲಿ ಸಂಬಂಧ 53 ಎಫ್ ಐ ಆರ್ ದಾಖಲಾಗಿದೆ. ಗುಂಪು ಘರ್ಷಣೆ ಸಂಬಂಧ 15 ಎಫ್ ಐ ಆರ್ ದಾಖಲಾಗಿದೆ, ದ್ವೇಷ ಭಾಷಣ ಸಂಬಂಧ 5 ಎಫ್ ಐ ಆರ್ ದಾಖಲಾಗಿದೆ ಎಂದು ವಿವರಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read