HomeKarnatakaBIG NEWS: ವಿಧಾನಸೌಧದಲ್ಲಿ 10.5 ಲಕ್ಷ ಹಣ ಪತ್ತೆ; ಸಹಾಯಕ ಇಂಜಿನಿಯರ್ ವಶಕ್ಕೆ

BIG NEWS: ವಿಧಾನಸೌಧದಲ್ಲಿ 10.5 ಲಕ್ಷ ಹಣ ಪತ್ತೆ; ಸಹಾಯಕ ಇಂಜಿನಿಯರ್ ವಶಕ್ಕೆ

ಬೆಂಗಳೂರು: ವಿಧಾನಸೌಧದಲ್ಲಿ 10.5 ಲಕ್ಷ ರೂಪಾಯಿ ಅನಧಿಕೃತ ನಗದು ಹಣ ಪತ್ತೆಯಾಗಿದ್ದು, ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಬ್ಯಾಗ್ ನಲ್ಲಿ ಈ ಹಣ ಪತ್ತೆಯಾಗಿದ್ದು, ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಹಣದ ಬ್ಯಾಗ್ ನೊಂದಿಗೆ ಸಹಾಯಕ ಇಂಜಿನಿಯರ್ ವಿಧಾನಸೌಧಕ್ಕೆ ಆಗಮಿಸಿದ್ದರು. ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಸಹಾಯಕ ಎಂಜಿನಿಯರ್ ಅವರ ಬ್ಯಾಗ್ ಪರಿಶೀಲಿಸಿದಾಗ 10.5 ಲಕ್ಷ ಹಣ ಪತ್ತೆಯಾಗಿದೆ. ವಿಚಾರಿಸಿದಾಗ ಸ್ಪಷ್ಟ ಮಾಹಿತಿ ನೀಡಿಲ್ಲ. ತಕ್ಷಣ ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ.

ಇನ್ನು ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಅವರನ್ನು ಮಂಡ್ಯ ಮೂಲದ ಜಗದೀಶ್ ಎಂದು ಗುರುತಿಸಲಾಗಿದೆ. ವಿಧಾನಸೌಧದಲ್ಲಿ ಹಣ ಪತ್ತೆ ಪ್ರಕರಣ ಸಂಬಂಧ ಇದೀಗ ಸಹಾಯಕ ಇಂಜಿನಿಯರ್ ಜಗದೀಶ್ ಅವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular