BIG NEWS: ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು: ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ವಿಧಾನಸೌಧದ 2 ಕಿ.ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಆದೇಶ ಹೊರಡಿಸಿದ್ದಾರೆ.

ವಿಧಾನಸೌಧದ 2 ಕಿ.ಮೀ ವ್ಯಾಪ್ತಿಯಲ್ಲಿ ಪ್ರತಿಭಟನೆ, ಧರಣಿ, ಮೆರವಣಿಗೆ ನಡೆಸುವಂತಿಲ್ಲ, ಹೆಚ್ಚಿನ ಜನರು ಸೇರುವಂತಿಲ್ಲ. ವಿಧಾನಸೌಧ ಸುತ್ತಮುತ್ತ ಹೆಚ್ಚಿನ ಭದ್ರತೆಗಾಗಿ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ 3 ಡಿಸಿಪಿ, 15 ಎಸಿಪಿ, 80 ಇನ್ಸ್ ಪೆಕ್ಟರ್ ಗಳು ಸೇರಿದಂತೆ 1500 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read