HomeIndiaBIG NEWS: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಆರೋಪಿಗೆ 14 ದಿನಗಳ ಕಾಲ...

BIG NEWS: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಪ್ರಯಾಣಿಕನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ನವೆಂಬರ್ 26ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ಶಂಕರ್ ಮಿಶ್ರಾ, ಸಹ ಪ್ರಯಾಣಿಕ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಆರೋಪಿ ಶಂಕರ್ ಮಿಶ್ರಾನನ್ನು ದೆಹಲಿ ಪೊಲೀಸರು ನಿನ್ನೆ ಬೆಂಗಳೂರಿನಲ್ಲಿ ಬಂಧಿಸಿದ್ದರು.

ಇಂದು ಶಂಕರ್ ಮಿಶ್ರಾನನ್ನು ಪೊಲೀಸರು ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ಗೆ ಹಾಜರುಪಡಿಸಿದ್ದು, ಕೋರ್ಟ್ ಆರೋಪಿ ಮಿಶ್ರಾಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular