
ಮಡಿಕೇರಿಯಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಸಿದ್ದರಾಮಯ್ಯನವರಿಗೆ ಕ್ಷೇತ್ರ ಹುಡುಕಿಕೊಳ್ಳಬೇಕಾದ ದಯನೀಯ ಸ್ಥಿತಿ ಎದುರಾಗಿದೆ. ಸಿದ್ದರಾಮಯ್ಯನವರ ಭಾಗ್ಯಗಳಿಗೆ ಜನ ಬೆಲೆ ಕೊಟ್ಟಿಲ್ಲ ಎಂಬುದು ಇದರಿಂದ ಅರ್ಥವಾಗುತ್ತದೆ ಎಂದರು.
ಜನರಿಗೆ ಸಿದ್ದರಾಮಯ್ಯ ಮೇಲೆ ವಿಶ್ವಾಸವಿಲ್ಲದಾಗಿದೆ. ಅಂತಿಮವಾಗಿ ಸಿದ್ದರಾಮಯ್ಯ ವರುಣಾ ಕ್ಷೇತ್ರಕ್ಕೆ ಬರುತ್ತಾರೆ ಎಂದು ಹೇಳಿದರು.

