BIG NEWS: ವಿಶೇಷ ವಿಮಾನದಲ್ಲಿ ಬೆಂಗಳೂರಿನತ್ತ ಜೊತೆಯಾಗಿ ಪ್ರಯಾಣಿಸಿದ ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್; ಹೆಚ್ ಎ ಎಲ್ ಬಳಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆ

ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿರುವ ನಿಯೋಜಿತ ಸಿಎಂ ಸಿದ್ದರಾಮಯ್ಯ ಹಾಗೂ ನಿಯೋಜಿತ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸ್ವಾಗತಕ್ಕೆ ಭರ್ಜರಿ ಸಿದ್ಧತೆ ನಡೆದಿದೆ.

ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಒಟ್ಟಿಗೆ ದೆಹಲಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಕೆಲವೆ ಹೊತ್ತಲ್ಲಿ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಇಬ್ಬರು ನಾಯಕರ ಸ್ವಾಗತಕ್ಕೆ ಭಾರಿ ಸಿದ್ಧತೆ ನಡೆಸಲಾಗಿದೆ.

ಹೆಚ್ ಎ ಎಲ್ ವಿಮಾನ ನಿಕ್ದಾಣದ ಬಳಿ ಅಭಿಮಾನಿಗಳು, ಬೆಂಬಲಿಗರ ದಂಡೇ ಆಗಮಿಸಿದ್ದು, ಸ್ವಾಗತಕ್ಕಾಗಿ ಕಾದು ಕುಳಿತಿದ್ದರಎ. ಇನ್ನೊಂದೆಡೆ ವಿವಿಧ ಕಲಾತಂಡಗಳಿಂದ ಸಂಭ್ರಮಾಚರಣೆ ನಡೆಸಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read