BIG NEWS: ವಿ. ಸೋಮಣ್ಣಗೆ ಕರೆ ಮಾಡಿ ಧೈರ್ಯ ತುಂಬಿದ ಅಮಿತ್ ಶಾ, ಬಿ.ಎಲ್. ಸಂತೋಷ್

ಬಿಜೆಪಿ ಮೇಲೆ ಮುನಿಸಿಕೊಂಡ ವಿ.ಸೋಮಣ್ಣ - Eesanje News

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ವರುಣಾ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಸೋಲನುಭವಿಸಿರುವ ವಸತಿ ಸಚಿವರಾಗಿದ್ದ ವಿ. ಸೋಮಣ್ಣ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕರೆ ಮಾಡಿ ಮಾತನಾಡಿದ್ದಾರೆ.

ಚುನಾವಣೆಯಲ್ಲಿ ಈ ರೀತಿಯ ಫಲಿತಾಂಶವನ್ನು ನಾವು ನಿರೀಕ್ಷಿಸಿರಲಿಲ್ಲ. ನಮ್ಮ ಎಣಿಕೆ ತಪ್ಪಾಗಿದೆ. ನಿಮ್ಮ ಜೊತೆ ಪಕ್ಷ ಹಾಗೂ ನಾವು ಸದಾ ಇರುತ್ತೇವೆ ಎಂದು ಧೈರ್ಯ ತುಂಬಿದ್ದಾರೆ ಎಂದು ತಿಳಿದುಬಂದಿದೆ.

ಎರಡು ಕ್ಷೇತ್ರಗಳಲ್ಲಿ ಸೋಲುಂಟಾದ ಹಿನ್ನೆಲೆಯಲ್ಲಿ ಹೈಕಮಾಂಡ್ ವಿರುದ್ಧ ವಿ. ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿದ್ದರು. ವರಿಷ್ಠರು ಸೂಚಿಸಿದ್ದಕ್ಕೇ ಎರಡೂ ಕ್ಷೇತ್ರಗಳಲ್ಲಿ ನಾನು ಸ್ಪರ್ಧಿಸಿದ್ದೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಅಮಿತ್ ಶಾ ಕರೆ ಮಾಡಿ ಸಮಾಧಾನ ಹೇಳಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read