BIG NEWS: ಶಾಸಕರ ಪುತ್ರನಿಂದ ಮುಖ್ಯೋಪಾದ್ಯಾಯರಿಗೆ ಬೆದರಿಕೆ; ದೂರು ದಾಖಲು

ಕಲಬುರ್ಗಿ: ಶಾಸಕ ಎಂ.ವೈ.ಪಾಟೀಲ್ ಅವರ ಪುತ್ರ ಮುಖ್ಯೋಪಾಧ್ಯಾಯರಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಅವರ ಪುತ್ರ ಅರುಣ್ ಪಾಟೀಲ್, ಸರ್ಕಾರಿ ಶಾಲೆ ಮುಖ್ಯೋಪಾಧ್ಯಾರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಮುಖ್ಯೋಪಾಧ್ಯಾಯ ಶಿವಕುಮಾರ್, ಅಫಜಲಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಫಜಲಪುರದ ಮಾಶಾಳ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾಗಿರುವ ಶಿವಕುಮಾರ್ ಅವರಿಗೆ ಅರುಣ್ ಪಾಟೀಲ್ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ತಮ್ಮ ಜೊತೆ ಮಾತನಾಡಿರುವ ಆಡಿಯೋ ಕೂಡ ಇದೆ ಎಂದು ಶಿವಕುಮಾರ್ ಪೊಲೀಸ್ ಠಾಣೆಗೆ ನೀಡಿದ್ದಾರೆ. ನಾನು ಶಾಲೆಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಬೇಕು. ನೀನು ಶಾಲೆಯಿಂದ ಜಾಗ ಖಾಲಿ ಮಾಡು ಇಲ್ಲವಾದಲ್ಲಿ ನಿನ್ನನ್ನು ನೋಡಿಕೊಳ್ತೇನೆ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read