BIG NEWS: ಶಾಸಕ ಮಾಡಾಳ್ ಬಂಧನಕ್ಕೆ ಸಿದ್ದರಾಮಯ್ಯ ಆಗ್ರಹ; ಜೈಲಿಗೆ ಹೋಗಿ ಬಂದ ಅಮಿತ್ ಶಾ ರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ವಾಗ್ದಾಳಿ

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನೂ ಬಂಧಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಅಂದ್ರೆ ಭ್ರಷ್ಟ ಜನತಾ ಪಾರ್ಟಿ ಎಂದು ಕರೆಯಬೇಕಾಗಿದೆ. ನನ್ನ ರಾಜಕೀಯ ಜೀವನದಲ್ಲಿಯೇ ಇಂತಹ ಭ್ರಷ್ಟ ಸರ್ಕಾರ ನೋಡಿರಲಿಲ್ಲ. ಬಿಜೆಪಿ ಸುಳ್ಳಿನ ಫ್ಯಾಕ್ಟರಿ, ಮೋದಿ, ಅಮಿತ್ ಶಾ, ಸಿಎಂ ಬೊಮ್ಮಾಯಿ, ಕಟೀಲ್ ಬರಿ ಸುಳ್ಳು ಹೇಳಿ ಕಾಲ ಕಳೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ನಾವು ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದರೆ ದಾಖಲಾತಿ ಕೊಡಿ ಅಂತಾರೆ. ಹಿಂದಿನ ಸರ್ಕಾರದಲ್ಲಿಯೂ ಭ್ರಷ್ಟಾಚಾರ ಇತ್ತು ಎಂದು ಸಮರ್ಥಿಸಿಕೊಳ್ಳುತ್ತಾರೆ. ಪಿಎಸ್ಐ ಹಗರಣದಲ್ಲಿ ಎಡಿಜಿಪಿ ಸುಮ್ಮನೇ ಜೈಲಿಗೆ ಹೋದ್ರಾ ? ಈಶ್ವರಪ್ಪ ಹೆಸರು ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ. ಪ್ರಧಾನಿಗೆ ಗುತ್ತಿಗೆದಾರರು ಪತ್ರ ಬರೆದರೂ ಕ್ರಮ ಕೈಗೊಂಡಿಲ್ಲ. ಜಿಲ್ಲಾಧಿಕಾರಿಯೊಬ್ಬರು ಜೈಲಿಗೆ ಹೋದರು. ಈಗ ಶಾಸಕರ ಪುತ್ರನೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೋಟಿ ಕೋಟಿ ಹಣ ಪತ್ತೆಯಾಗಿದೆ. ಇದಕ್ಕಿಂತ ದಾಖಲೆಗಳು ಬೇಕಾ ?ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಬಿಜೆಪಿ ಭ್ರಷ್ಟಾಚಾರಕ್ಕೆ ಇನ್ನೇನು ಸಾಕ್ಷಿ ಬೇಕು ? ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಸರ್ಕಾರ ಇದ್ದಾಗ ರಾಜ್ಯ ಕಾಂಗ್ರೆಸ್, ದೆಹಲಿ ಹೈಕಮಾಂಡ್ ಎಟಿಎಂ ಆಗಿತ್ತು ಎಂದು ಅಮಿತ್ ಶಾ ಆರೋಪಿಸುತ್ತಿದ್ದಾರೆ. ವಾರಕ್ಕೆ ಮೂರು ಬಾರಿ ರಾಜ್ಯಕ್ಕೆ ಭೇಟಿ ನೀಡಿತ್ತಿರುವ ಅಮಿತ್ ಶಾ ಅವರು ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಉತ್ತರ ನೀಡಲಿ. ರಾಜ್ಯ ಬಿಜೆಪಿ ಯಾರ ಎಟಿಎಂ ಆಗಿದೆ ? ಜೈಲಿಗೆ ಹೋಗಿ ಬಂದಿರುವ ಅಮಿತ್ ಶಾ ರಿಂದ ನಾವು ಪಾಠ ಕಲೀಬೇಕಾ? ಎಂದು ವಾಗ್ದಾಳಿ ನಡೆಸಿದರು.

ಮೊದಲು ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಅರೆಸ್ಟ್ ಮಾಡಲಿ. ಸಿಎಂ ಬೊಮ್ಮಾಯಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read